ಉಡುಪಿ: ಜಿಲ್ಲೆಯಲ್ಲಿ ಇಂದು ಕೂಡ 72 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1733ಕ್ಕೆ ಏರಿಕೆಯಾಗಿದೆ.
ಉಡುಪಿ ತಾಲ್ಲೂಕಿನ 16, ಕುಂದಾಪುರದ 41 ಮತ್ತು ಕಾರ್ಕಳದ 15 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 72 ಮಂದಿ ಸೋಂಕಿತರ ಪೈಕಿ 51 ಪುರುಷರು, 19 ಮಹಿಳೆಯರು ಮತ್ತು ಎರಡು ಮಕ್ಕಳು ಇದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಂದು 80 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 1360 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 370 ಸಕ್ರಿಯ ಸೋಂಕಿತ ಪ್ರಕರಣಗಳಿವೆ ಎಂದು ತಿಳಿಸಿದೆ.












