ಉಡುಪಿ: ಮುಂಬೈಯಿಂದ ಉಡುಪಿ ಜಿಲ್ಲೆಗೆ ಬಂದ 92 ಮಂದಿಯಲ್ಲಿ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರ ಪೈಕಿ ಒಂದು ಮಗು ಸಹಿತ 78 ಪುರುಷರು ಹಾಗೂ 13 ಮಹಿಳೆಯರು ಇದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 564ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 82 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.