ಉಡುಪಿ: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ನಾಳೆ (ಅ. 28) ವಿಶ್ವದಾದ್ಯಂತ ಏಕಕಾಲದಲ್ಲಿ ನಡೆಯುವ ಲಕ್ಷ-ಲಕ್ಷ ಕಂಠಗಳ ಕನ್ನಡ ಗೀತಗಾಯನ “ಮಾತಾಡ್ ಮಾತಾಡ್ ಕನ್ನಡ” ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾವು ಕೈಜೋಡಿಸಿದೆ.
ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ನೇತೃತ್ವದಲ್ಲಿ ಉಡುಪಿ ಬಿಜೆಪಿ ಕಚೇರಿಯಲ್ಲಿ ಏಕಕಾಲದಲ್ಲಿ “ಮಾತಾಡ್ ಮಾತಾಡ್ ಕನ್ನಡ” ಗೀತಗಾಯನ ಕಾರ್ಯಕ್ರಮ ನಡೆಯಲಿದೆ.
ಆ ಬಳಿಕ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯ ತಂಡದ ಸಭೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಮಹಿಳಾ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಹಾಗೂ ಪ್ರಮೀಳಾ ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.