ಉಡುಪಿ:ಕರ್ನಾಟಕ ರಾಜ್ಯ ಮಕ್ಕಳ ಹಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಪ್ರವಾಸ ಕಾರ್ಯಕ್ರಮ

ಉಡುಪಿ:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ಮಾರ್ಚ್ 12 ರಿಂದ 14 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾ. 12 ರಂದು ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ಮಾ. 13 ರಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 1.30 ರ ವರೆಗೆ
ಉಡುಪಿ ನಗರದಲ್ಲಿರುವ ಮಕ್ಕಳ ಪಾಲನಾ ಸಂಸ್ಥೆ, ವಸತಿ ಶಾಲೆ/ ನಿಲಯ, ಪೊಲೀಸ್ ಠಾಣೆ, ಅಂಗನವಾಡಿ ಹಾಗೂ ಜಿಲ್ಲಾಸ್ಪತ್ರೆಗೆ
ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ ಆರ್.ಟಿ.ಇ, ಪೋಕ್ಸೋ ಮತ್ತು ಬಾಲ ನ್ಯಾಯ
ಕಾಯಿದೆ ಹಾಗೂ ಮಕ್ಕಳ ರಕ್ಷಣಾ ವ್ಯವಸ್ಥೆಗಳ ಅನುಷ್ಠಾನದ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ
ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಂತರ ವಾಸ್ತವ್ಯ ಮಾಡಲಿದ್ದಾರೆ.

ಮಾ. 14 ರಂದು ಬೆಳಗ್ಗೆ 8 ಗಂಟೆಗೆ ಉಡುಪಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿರುವ ಮಕ್ಕಳ ಪಾಲನಾ ಸಂಸ್ಥೆ, ವಸತಿ ಶಾಲೆ/
ನಿಲಯ, ಪೊಲೀಸ್ ಠಾಣೆ, ಅಂಗನವಾಡಿ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.