ಉಡುಪಿ: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಅಬಕಾರಿ ಇಲಾಖೆಯ ಖಾಲಿ ಅಥವಾ ಲಭ್ಯವಿರುವ ಮದ್ಯದ ಸನ್ನದುಗಳನ್ನು ಇ-ಹರಾಜು ಮಾಡಲು ಸರ್ಕಾರವು ಉದ್ದೇಶಿಸಿದ್ದು, ಅದರಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂಭಾವ್ಯ ಬಿಡ್ಡುದಾರರಿಗೆ ತರಬೇತಿಯನ್ನು ಜನವರಿ 6 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿರುತ್ತದೆ.
ಸದರಿ ತರಬೇತಿಯನ್ನು ಅಬಕಾರಿ ಇಲಾಖೆ ಹಾಗೂ ಎಂಎಸ್‌ಟಿಸಿ ರವರು ನೀಡಲಿದ್ದು, ಆಸಕ್ತ ಬಿಡ್ಡುದಾರರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.ಹರಾಜು ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://stateexcise,Karnataka.gov.in/en ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಬಕಾರಿ ಉಪ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
















