ಉಡುಪಿ:ಜೀವ ರಕ್ಷಕ ಸಿಬ್ಬಂದಿಗಳ ತರಬೇತಿ

ಉಡುಪಿ: ಉಡುಪಿ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್, ತ್ರಾಸಿ-ಮರವಂತೆ ಬೀಚ್, ಆಸರೆ ಬೀಚ್, ಮಲ್ಪೆ ಬೀಚ್, ಸೈಂಟ್ ಮೇರೀಸ್ ದ್ವೀಪ, ಕಾಪು ಬೀಚ್ ಹಾಗೂ ಪಡುಬಿದ್ರಿ ಮುಖ್ಯ ಬೀಚ್ ಗಳಲ್ಲಿ ಜೀವ ರಕ್ಷಕ ಸಿಬ್ಬಂದಿಗಳ ನಿಯೋಜನೆಗಾಗಿ ಪ್ರವಾಸೋದ್ಯಮ ಇಲಾಖೆ ವತಿಯಿಂದ 20 ಜನರಿಗೆ ಜೀವ ರಕ್ಷಕ ತರಬೇತಿ ನೀಡಲಾಗುತ್ತಿದ್ದು, ಕನಿಷ್ಟ 18 ರಿಂದ 40 ವರ್ಷ ವಯೋಮಿತಿಯೊಳಗಿನ 1 ಕಿ.ಮೀ ಓಟ ಮತ್ತು 400 ಮೀ ಈಜಲು ಸಾಮರ್ಥ್ಯ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರದೊಂದಿಗೆ ಫೆಬ್ರವರಿ 2 ರಂದು ಬೆಳಿಗ್ಗೆ 9.00 ಗಂಟೆಯ ಒಳಗಾಗಿ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ (ಈಜುಕೊಳ)ದಲ್ಲಿ ಹಾಜರಾಗಿ ಹೆಸರು ನೋಂದಾಯಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ 06 ದಿನಗಳ ಕಾಲ ತರಬೇತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, ಎರಡನೇ ಮಹಡಿ ಕೊಠಡಿ ಸಂಖ್ಯೆ 303 ಅಥವಾ ದೂ.ಸಂಖ್ಯೆ 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.