ಉಡುಪಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣ ಘಟಕ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಿಗೆ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ರಕ್ಷಣೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು ಡಿಸೆಂಬರ್ 22 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹಿರಿಯ ಸಿವಿಲ್ ನ್ಯಾಯಾಧೀಶ ಮನುಪಟೇಲ್ ಬಿ.ವೈ, ಬಾಲನ್ಯಾಯ ಮಂಡಳಿಯ ಗೌರವಾನ್ವಿತ ಅಧ್ಯಕ್ಷ ಸಂತೋಷ್ ಶ್ರೀವಾತ್ಸವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಜೂಹಿ ದಾಮೋದರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಕೊಪ್ಪಳ ಮಕ್ಕಳ ಸಂರಕ್ಷಣಾ ಯೋಜನೆ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ ರಾಘವೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಲಿದ್ದಾರೆ.















