ಉಡುಪಿ:ಕಾಳುಮೆಣಸು ಮತ್ತಿತರೆ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು ಕುರಿತು ತರಬೇತಿ

ಉಡುಪಿ: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಚಿಕ್ಕಮಗಳೂರು ಇವರ ಸಹಯೋಗದಲ್ಲಿ “ಕಾಳುಮೆಣಸು ಮತ್ತಿತರೆ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು ಫೆಬ್ರವರಿ 17 ರಂದು ಬೆಳಗ್ಗೆ 10 ಗಂಟೆಗೆ ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ತರಬೇತಿಯನ್ನು ಸಂಬಾರು ಬೆಳೆಗಳ ವಿವಿಧ ವಿಷಯ ತಜ್ಞರು ನೀಡಲಿದ್ದು, ಸಂಬಾರು ಬೆಳೆಗಾರರು, ರೈತ ಉತ್ಪಾದಕ ಸಂಸ್ಥೆಗಳು, ಸಂಬಾರು ಉತ್ಪನ್ನಗಳ ಉದ್ದಿಮೆದಾರರು ತರಬೇತಿಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.