ಉಡುಪಿ: ಮಂಗಳೂರಿನ ಬಂಗ್ರ ಕೂಳೂರು ಗೋಲ್ಡ್ಪಿಂಚ್ ಮೈದಾನ ಇಲ್ಲಿ ಮೇ 10 ರಂದು ನಡೆಯಲಿರುವ ನವೋದಯ
ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್(ರಿ) ಮಂಗಳೂರು ಇವರ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗುತ್ತಿರುವ ಹಿನ್ನೆಲೆ, ಸದರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ,ಕಾರ್ಕಳ, ಕುಂದಾಪುರ, ಸಿದ್ದಾಪುರ, ಬೈಂದೂರು ಹಾಗೂ ಭಟ್ಕಳ ವಲಯಗಳ ಸಾರಿಗೆ ಕರ‍್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಕ.ರಾ.ರ.ಸಾ.ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಕಚೇರಿ ಪ್ರಕಟಣೆ ತಿಳಿಸಿದೆ.












