ಉಡುಪಿ:ತ್ರಿಶಾ ಕ್ಲಾಸಸ್ : ಸಿ ಎಸ್ ಇ ಇ ಟಿ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ ಎಸ್ ಇ ಇ ಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತ್ರಿಶಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ ಕಾಯರಕಟ್ಟೆ ಇವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ಸಾಹ ತೋರಿಸಬೇಕು. ಮುಂದಿನ ಹಂತಗಳನ್ನು ಉತ್ತಮ ತಯಾರಿಯೊಂದಿಗೆ ಪೂರ್ಣಗೊಳಿಸಬೇಕು. ಕಲಿಕೆಯೊಂದಿಗೆ ವೃತ್ತಿಪರತೆ ಯನ್ನು ಅಳವಡಿಸಿಕೊಳ್ಳಬೇಕು ಎನ್ನುತ್ತ ಸಾಧಕರಿಗೆ ಶುಭಕೋರಿದರು.

ಈ ಕಾರ್ಯಕ್ರಮದಲ್ಲಿ ಸಾಧಕರನ್ನು ಪೋಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತ್ರಿಶಾ ಕ್ಲಾಸಸ್ ನಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ತ್ರಿಶಾ ಕ್ಲಾಸಸ್ ಮಂಗಳೂರು ಕೇಂದ್ರದ ಮುಖ್ಯಸ್ಥೆಯಾದ ಪ್ರೊ. ಯಶಸ್ವಿನಿ ಯಶ್ ಪಾಲ್, ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಿಂಚನ ಹಾಗೂ ದಿಶಾ ಪ್ರಾರ್ಥಿಸಿ, ಅನ್ವಿ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಸಮೃದ್ಧಿ ಎಸ್ ಆಳ್ವ ವಂದಿಸಿದರು.