ಉಡುಪಿ:ಕರಾಟೆಯಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ವಿದ್ಯಾರ್ಥಿಗಳ ಸಾಧನೆ

ಉಡುಪಿ:ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರೀತಿ ಹಾಗೂ ವಿಜ್ಞಾನ ವಿಭಾಗದ ಪಂಚಾಕ್ಷರಿ ಶಾಂತಗೌಡ ರೋಣದ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನು ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಸಿಎ ಗೋಪಾಲಕೃಷ್ಣ ಭಟ್, ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಹರಿಪ್ರಸಾದ್ ರಾವ್ ಮತ್ತು ಶಿಕ್ಷಕವೃಂದದವರು ಅಭಿನಂದಿಸಿದರು.