ಉಡುಪಿ: ಎರಡೂವರೆ ವರ್ಷ ಪ್ರಾಯದ ಮಗು ಕೋವಿಡ್ ಗೆ ಬಲಿ

ಉಡುಪಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಎರಡೂವರೆ ವರ್ಷ ಪ್ರಾಯದ ಗಂಡು ಮಗು ಭಾನುವಾರ ಕೋವಿಡ್ ನಿಂದ ನಿಧನವಾಗಿದೆ.

ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಮನೆಯವರು ಜೂ.17ರಂದು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಮಗುವಿನ ಕೋವಿಡ್ ಪರೀಕ್ಷೆ ಪಾಸಿಟಿವ್ ಬಂದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ನಿನ್ನೆ ಸಾವನ್ನಪ್ಪಿದೆ ಎಂದು ಡಿಎಚ್‌ಓ ತಿಳಿಸಿದ್ದಾರೆ.