ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ ಎರಡು ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1028 ಕ್ಕೆ ಏರಿಕೆಯಾಗಿದೆ. ಇಂದು 23 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 736 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಇನ್ನು 291 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.












