ಉಡುಪಿ:ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜನವರಿ 19 ಮತ್ತು 20 ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜ. 19 ರಂದು ಬೆಳಗ್ಗೆ 10 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಶಾಸಕರುಗಳಾದ ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.