ಉಡುಪಿ: ಅನ್ ಲಾಕ್ ಮಾರ್ಗಸೂಚಿ ಪ್ರಕಟ; ಸಂಪೂರ್ಣ ಮಾಹಿತಿ ಇಲ್ಲಿದೆ

ಉಡುಪಿ: ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕೆಳಗಿಳಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ (ಜೂನ್ 21) ಅನ್ ಲಾಕ್ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಉಡುಪಿ ಜಿಲ್ಲಾಧಿಕಾರಿ ಅನ್ ಲಾಕ್ ಮಾರ್ಗಸೂಚಿ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.

ನೂತನ ಮಾರ್ಗಸೂಚಿಯ ವಿವರ ಹೀಗಿದೆ:
ಜಿಲ್ಲೆಯಾದ್ಯಂತ ಸಂಜೆ 7.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ- A ರಲ್ಲಿನ ಮಾರ್ಗಸೂಚಿಗಳಂತೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.
ಜಿಲ್ಲೆಯಾದ್ಯಾಂತ ಶುಕ್ರವಾರ ಸಂಜೆ 7.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 5.00 ಗಂಟೆಯ ವರೆಗೆ ಅನುಬಂಧ – B ರಲ್ಲಿನ ಮಾರ್ಗಸೂಚಿಗಳನ್ವಯ ಕಟ್ಟುನಿಟ್ಟಿನ ವಾರಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ.
ಜಿಲ್ಲೆಯಲ್ಲಿ ಬಸ್ಸುಗಳ ಸಂಚಾರವನ್ನು ಆಸನ ಸಾಮರ್ಥ್ಯದ 50% ರೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ, ಬಸ್‌ ಗಳಲ್ಲಿ ನಿಂತುಕೊಂಡು ಪ್ರಯಾಣ ಮಾಡಲು ನಿರ್ಭಂಧಿಸಲಾಗಿದೆ.

ಕೋವಿಡ್ – 19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಉಲ್ಲೇಖ(1)ರ ಸರ್ಕಾರದ ಆದೇಶ ಮತ್ತು ಸೇರ್ಪಡೆ ಆದೇಶಗಳನ್ನು ಯಥಾವತ್ತಾಗಿ ಹಾಗೂ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಉಲ್ಲೇಖ (2), ಆದೇಶವನ್ನು ದಿನಾಂಕ: 05.07.2021 ರ ಪೂರ್ವಹ್ನ 5.00 ಗಂಟೆಯವರೆಗೆ ಮುಂದುವರಿಸಲಾಗಿದೆ. ಹಾಗೂ ಈ ಕೆಳಕಂಡ ಹೆಚ್ಚುವರಿ ಚಟುವಟಿಕೆಗಳನ್ನು ಅನುಮತಿಸಲಾಗಿದೆ.

ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಎಲ್ಲಾ ಉತ್ಪಾದನಾ ಘಟಕಗಳು/ ಕೈಗಾರಿಕಾ ಸಂಸ್ಥೆಗಳು /ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯಾಚರಿಸಲು ಅನುಮತಿಸಲಾಗಿದೆ.ಆದಾಗ್ಯೂ ಉಡುಪು(Garment) ತಯಾರಿಕೆಯಲ್ಲಿ ತೊಡಗಿರುವ ಘಟಕಗಳು/ ಕೈಗಾರಿಕಾ ಸಂಸ್ಥೆಗಳು / ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ 30% ರಷ್ಟು ಸಿಬ್ಬಂದಿಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಕಾರ್ಯಚರಿಸಲು ಅನುಮತಿಸಲಾಗಿದೆ.

ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಎಲ್ಲ ಅಂಗಡಿಗಳಿಗೆ ( Essential /Non – Essential) ಪ್ರತಿ ದಿನ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತೆರೆಯಲು ಅನುಮತಿಸಲಾಗಿದೆ. ಆದರೆ ಹವಾನಿಯಂತ್ರಿತ ಅಂಗಡಿಗಳು , ವಾಣಿಜ್ಯ ಸಂಕೀರ್ಣ, ಮಾಲ್ ಗಳು ಕಾರ್ಯನಿರ್ವಹಿಸಲು ಅವಕಾಶವಿರುವುದಿಲ್ಲ.ಮನೆಯಿಂದ ಸಾರ್ವಜನಿಕರು ಹೊರ ಬರುವುದನ್ನು ಕಡಿಮೆ ಮಾಡಲು ಕೋವಿಡ್ ನಿರ್ವಹಣೆಗಾಗಿರುವ ರಾಷ್ಟೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಎಲ್ಲಾ ವಸ್ತುಗಳ 24*7 ಹೋಂ ಡೆಲಿವರಿ ಸೇವೆಗಳನ್ನು ಪ್ರೋತ್ಸಾಹಿಸಲಾಗುವುದು.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು ಮತ್ತು ಎಲ್ಲಾ ಅಂಗಡಿಗಳಲ್ಲಿ ಮಾಲಿಕರು /ಸಿಬ್ಬಂದಿ ಮತ್ತು ಗ್ರಾಹಕರು ಮಾಸ್ಕ್‌ ಧರಿಸುವದು ಕಡ್ಡಾಯ, ಸಾಮಾಜಿಕ ಅಂತರ ಕಾಪಾಡಲು ಮಾರ್ಕುಗಳನ್ನು ಹಾಕುವುದು ಕಡ್ಡಾಯವಾಗಿದೆ.ಯಾವುದೇ ಅಂಗಡಿಯಲ್ಲಿ ಜನ ಜಂಗುಳಿ ಇರತಕ್ಕದ್ದಲ್ಲ.ತಲ್ಲಪಿದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ಕೋವಿಡ್‌ ಮುಗಿಯುವ ತನಕ ಅಮಾನತ್ತಿನಲ್ಲಿಡಲಾಗುವುದು)

ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸದೇ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೋಟೆಲ್‌, ರೆಸ್ಟೋರೆಂಟ್‌, ಬಾರ್ ಮತ್ತು ಕ್ಲಬ್ ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತುಕೊಂಡು ಆಹಾರ ಸೇವಿಸಲು ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5.00 ಗಂಟೆವರೆಗೆ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಆದರೆ ಪಬ್ ಗಳಿಗೆ ಅನುಮತಿ ಇರುವುದಿಲ್ಲ. ಶೇ 50 ಸಾಮರ್ಥ್ಯದೊಂದಿಗೆ ಲಾಡ್ಜ್‌ ಗಳು ಮತ್ತು ರೆಸಾರ್ಟ್‌ ಗಳಿಗೆ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಕಡ್ಡಾಯವಾಗಿ ಅನುಸರಿಸುವ ಷರತ್ತುಗಳೊಂದಿಗೆ ಅವಕಾಶ ನೀಡಲಾಗಿದೆ.(ಹವಾನಿಯಂತ್ರಣ ವ್ಯವಸ್ಥೆಯನ್ನು ಚಾಲನೆಗೊಳಿಸಿದ್ದಲ್ಲಿ ಸದ್ರಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ವಹಿಸಲಾಗುವುದು)

ಚಲನಚಿತ್ರ/ ಟಿ. ವಿ ಧಾರವಾಹಿಗಳಿಗೆ ಸಂಬಂಧಿಸಿದಂತೆ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

ಕಟ್ಟಡ ನಿರ್ಮಾಣ ಮತ್ತು ದುರಸ್ಥಿಗೆ ( Construction activities/ Civil repair ) ಅನುಮತಿಸಿದೆ.ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಅಂಗಡಿಗಳು / ಸಂಸ್ಥೆಗಳಿಗೆ ಬೆಳಿಗ್ಗೆ 6-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ ಕೋವಿಡ್ ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಅನುಮತಿಸಿದೆ.

ವಾಕಿಂಗ್ ಮತ್ತು ಜಾಗಿಂಗ್‌ ಗಾಗಿ ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಉದ್ಯಾನವನಗಳನ್ನು ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ತೆರೆಯಲು ಅನುಮತಿಸಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳನ್ನು ಅನುಮತಿಸಲಾಗುವುದಿಲ್ಲ.

ಶೇ. 50 ಸಾಮರ್ಥ್ಯದೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಮತ್ತು ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಜಿಮ್‌ ಗಳಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಗರಿಷ್ಠ 2 ಪ್ರಯಾಣಿಕರೊಂದಿಗೆ ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳಿಗೆ ಸಂಚರಿಸಲು ಅನುಮತಿಸಿದೆ.

ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಮತ್ತು ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗಳಿಗೆ ಅನುಮತಿ ನೀಡಲಾಗಿದೆ.( ಒಳಾಂಗಣ ಕ್ರೀಡೆಗಳಿಗೆ ಅವಕಾಶ ಇರುವುದಿಲ್ಲ )

ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಅನುಸರಿಸುವ ಷರತ್ತುಗಳೊಂದಿಗೆ ಎಲ್ಲ ಸರ್ಕಾರಿ/ ಖಾಸಗಿ ಕಛೇರಿಗಳಿಗೆ ಸಿಬ್ಬಂದಿಯ ಶೇ. 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದಾಗ್ಯೂ, ಅಗತ್ಯ ಮತ್ತು ತುರ್ತು ಸೇವೆಗಳೊಂದಿಗೆ ವ್ಯವಹರಿಸುವ ಕಚೇರಿಗಳಿಗೆ ಅವುಗಳ ಅಗತ್ಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ಅನುಮತಿಸಿದೆ. ಸಾಧ್ಯವಾದಷ್ಟು ಮನೆಯಿಂದ ಕೆಲಸವನ್ನು ನಿರ್ವಹಿಸಲು ಪ್ರೋತ್ಸಾಹಿಸುವುದು.

ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಲಾಗಿದೆ.

ಮದುವೆಗಳು: “ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.
ವಿವಾಹಗಳನ್ನು ಆಯೋಜಿಸುವವರು ವಿವಾಹ ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.

ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ ಕಾರ್ಯಕ್ರಮಕ್ಕೆ 40 ಪಾಸ್‌ಗಳನ್ನು ನೀಡಬೇಕು.
ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.
ಮದುವೆ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್‌ ಸಮುಚಿತ ವರ್ತನೆಯನ್ನು (COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್‌ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.

ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ.

ನೈಟ್‌ ಕರ್ಫ್ಯೂ ಗೆ ಮಾರ್ಗಸೂಚಿಗಳು:
ರಾತ್ರಿ 7.00 ರಿಂದ ಪೂರ್ವಾಹ್ನ 05.00ರ ನಡುವೆ ಅಗತ್ಯ ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು – ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿಸಿದೆ.

ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಹಾಗೂ ಅಂತಹ ಸಂಸ್ದೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಧೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ / ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚಾರಿಸಬಹುದಾಗಿದೆ.
ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಒದಗಿಸುವ ನೌಕರರು ಹಾಗೂ ವಾಹನಗಳನ್ನು ತಮ್ಮ ಸಂಸ್ಧೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯನ್ನು ಸಲ್ಲಿಸಿ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಜಾನ ಮತ್ತು ಮಾಹಿತಿ ತಂತ್ರಜ್ಜಾನ ಆಧಾರಿತ ಕಂಪನೆ / ಸಂಸ್ದೆ ( IT and ITeS companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅಗತ್ಯ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕಾರ್ಯನಿರ್ವಹಿಸುವುದು (work from home)
ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವೆಗಳು ಯಥಾ ರೀತಿಯಲ್ಲಿ ಸರಕಾರದ ನಿಯಮಗಳೊಂದಿಗೆ ಕಾರ್ಯನಿರ್ವಹಿಸವುದು. ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿದೆ.
ಎಲ್ಲಾ ತರಹದ ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು ವಾಹನ ಅಥವಾ ಇತರೆ ಸರಕು ಸಾಗಾಟ ವಾಹನಗಳು , ಖಾಲಿ ವಾಹನಗಳನ್ನು ಒಳಗೊಂಡು ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಕಂಪನಿಗಳು ಹಾಗೂ ಹೋಮ್ ಡೆಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿಸಿದೆ.
ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ .ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ , ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, , ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿಗಳು:
ಈ ಕೆಳಗಿನ ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ , ಶುಕ್ರವಾರ ಸಂಜೆ 7.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು, ಅಗತ್ಯ ಸೇವೆಗಳು ಮತ್ತು COVID-19 ಕಂಟೈನ್ಮೆಂಟ್ ಮತ್ತು ಮ್ಯಾನೇಜ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಇಂತಹ ಸಂಸ್ಧೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.

ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24/7 ಕಾರ್ಯಾಚರಣೆಗಳ ಅಗತ್ಯವಿರುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳು / ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು, ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸಬಹುದಾಗಿರುತ್ತದೆ. ಆದಾಗ್ಯೂ, ಸಾಧ್ಯವಾದಷ್ಟು ಮಟ್ಟಿಗೆ, ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು.

ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳನ್ನು ಸಂಬಂಧಿಸಿದ ಸಂಸ್ಧೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಜಾನ ಮತ್ತು ಮಾಹಿತಿ ತಂತ್ರಜ್ಜಾನ ಆಧಾರಿತ ಕಂಪನಿ / ಸಂಸ್ದೆ ( IT and ITeS companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅವಶ್ಯಕ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡು ಕಾರ್ಯನಿರ್ವಹಿಸುವುದು .ಅವರನ್ನು ಹೊರತು ಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕೆಲಸ ನಿರ್ವಹಿಸುವುದು (work from home).
ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿಸಿದೆ.
ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.ಆದರೆ ಯಾವುದೇ ತಯಾರಿಸಲಾದ ಆಹಾರ, ಪಾನಿಪುರಿ, ಚಾಟ್ಸ್‌ ಮುಂತಾದವುಗಳ ಮಾರಾಟಕ್ಕೆ ಅವಕಾಶವಿಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆ(PDS)ಯ ಅಂಗಡಿಗಳಿಗೆ ಅವಕಾಶವಿದೆ ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.. ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 6.00 ರಿಂದ ಅಪರಾಹ್ನ 2.00 ರವರೆಗೆ ಪಾರ್ಸೆಲ್‌ ಕೊಂಡುಹೋಗಲು ಮಾತ್ರ ಅನುಮತಿಸಲಾಗಿದೆ.. ಜನರು ಮನೆಯಿಂದ ಹೊರಕ್ಕೆ ಸಂಚರಿಸುವುದನ್ನು ಕಡಿಮೆ ಮಾಡಲು COVID 19 ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ 24×7ಹೋಮ್‌ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸುವುದು.
ರೆಸ್ಟೋರೆಂಟ್‌ ಗಳಲ್ಲಿ ಮತ್ತು ತಿನಿಸುಕೇಂದ್ರಗಳಲ್ಲಿ, ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿಗಳನ್ನು ಮಾತ್ರ ಅನುಮತಿಸಲಾಗಿದೆ.

ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ..ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ , ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, , ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಮತ್ತು ಕೋವಿಡ್‌ 19 ಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತುಗಳೊಂದಿಗೆ ಸಂಚಾರಕ್ಕೆ ಅನುಮತಿಸಲಾಗಿದೆ.
ಮದುವೆಗಳು: “ಈಗಾಗಲೇ ನಿಗದಿಯಾಗಿರುವ ಮದುವೆಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು /ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ನಡೆಸಲು ಅನುಮತಿಸಲಾಗಿದೆ.
ವಿವಾಹಗಳನ್ನು ಆಯೋಜಿಸುವವರು ವಿವಾಹ ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.

ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ ಕಾರ್ಯಕ್ರಮಕ್ಕೆ 40 ಪಾಸ್‌ಗಳನ್ನು ನೀಡಬೇಕು
ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.
ಮದುವೆ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್‌ ಸಮುಚಿತ ವರ್ತನೆಯನ್ನು (COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್‌ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

ಶವಸಂಸ್ಕಾರ /ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್‌ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.