ಉಡುಪಿ: ಮನೆಯ ಮೇಲ್ಛಾವಣಿಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಅವಿವಾಹಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಹೊರವಲಯದ ಚಿಟ್ಪಾಡಿ ಕಸ್ತೂರ್ಬಾ ನಗರದಲ್ಲಿ ನಡೆದಿದೆ.
ಚಿಟ್ಪಾಡಿ ಕಸ್ತೂರ್ಬಾ ನಗರದ ನಿವಾಸಿ ಸುರೇಶ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ 15 ವರ್ಷಗಳಿಂದ ವಿಪರೀತ ಮದ್ಯವ್ಯಸನಿಯಾಗಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಫೆ.27ರ ಸಂಜೆ 5.30ರಿಂದ 6.30ರ ಮಧ್ಯೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.