ಉಡುಪಿ:ವಚನ ಕಲ್ಯಾಣ 9 ಗಂಟೆಗಳ ನಾಟಕ ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ‘ ವಚನ ಕಲ್ಯಾಣ ‘ಎಂಬಅಹೋರಾತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿದೆ. ಆ ಸಂಬಂಧ ನುರಿತ ಹಾಗೂ ಆಸಕ್ತ ಯುವಕ ಯುವತಿಯರು ಹಾಗೂ ಅನುಭವಿ ರಂಗಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನುಅಹ್ವಾನಿಸಿದೆ.

ವಯೋಮಿತಿ 18 ರಿಂದ 40 ವರ್ಷಗಳು ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಅದ್ಯತೆಯನ್ನು ನೀಡಲಾಗುವುದು. ತುಂಬಿದ ಅರ್ಜಿಗಳನ್ನು ಮಾರ್ಚ್ 20 ರ ಒಳಗೆ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056. ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ತಲುಪುವಂತೆ ಅಥವಾ ಮೇಲ್ ವಿಳಾಸ: [email protected] ಮೂಲಕ ಸಲ್ಲಿಸಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕವಾಗಿ ತರಬೇತಿ-ಪ್ರದರ್ಶನಗಳಲ್ಲಿಪಾಲ್ಗೊಳ್ಳುವುದು ಕಡ್ಡಾಯ. ಮಾಸಿಕ ಗೌರವಧನ ಮತ್ತು ಊಟ -ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಅರ್ಜಿಯನಮೂನೆಯನ್ನು ಕನ್ನಡ ಸಂಸ್ಕೃತಿ ಇಲಾಖೆಯ ವೆಬ್‌ಸೈಟ್ https://kannadasiri.karnataka.gov.in ನಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿ ವಿವರಗಳಿಗಾಗಿ ಸಿ. ಬಸವಲಿಂಗಯ್ಯ (ವಚನ ಕಲ್ಯಾಣ ನಾಟಕದ ನಿರ್ದೇಶಕರು), ಮೊಬೈಲ್ ಸಂಪರ್ಕ ಸಂಖ್ಯೆ-9448538620 ಅನ್ನು ಸಂಪರ್ಕಿಸಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಇಲಾಖೆಯು ಯಾವುದೇ ಭತ್ಯೆನೀಡಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.