ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ
ಅನುಷ್ಠಾನಗೊಳಿಸಲಾದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ
(ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ ಮತ್ತು ವಿದೇಶಿ ವ್ಯಾಸಾಂಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ
ಸೇವಾಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ವೆಬ್ಸೈಟ್ https://www.kaushalkar.com ನಲ್ಲಿ
ಆನ್ಲೈನ್ ಮೂಲಕ ಜುಲೈ 2 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848, 7899899039 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.












