ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವು ನವೆಂಬರ್ 11 ರಂದು ಬೆಳಗ್ಗೆ 10.15 ಕ್ಕೆ ನಗರದ ಮಣಿಪಾಲ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ
ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್,
ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್.
ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಣಿಪಾಲ ಹೈಸ್ಕೂಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಮಣಿಪಾಲ ಪದವಿ ಪೂರ್ವ ಕಾಲೇಜು ಸಂಚಾಲಕ ಕೆ.ಪ್ರಕಾಶ್ ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಕುಂದಾಪುರ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಚೇತನ್ ಶೆಟ್ಟಿ ಕೋವಾಡಿ ಉಪನ್ಯಾಸ ನೀಡಲಿದ್ದಾರೆ.

















