ಉಡುಪಿ: ವಿದೇಶದಿಂದ ಬಂದ ಆರು ಮಂದಿಯಲ್ಲಿ ಕೊರೊನಾ ಲಕ್ಷಣ, ಆಸ್ಪತ್ರೆಗೆ ದಾಖಲು

ಉಡುಪಿ: ವಿದೇಶದಿಂದ ಜಿಲ್ಲೆಗೆ ಬಂದ ಆರುಮಂದಿಯಲ್ಲಿ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದು, ಐವರಿಗೆ ಜಿಲ್ಲಾಸ್ಪತ್ರೆ ಹಾಗೂ ಒಬ್ಬರಿಗೆ ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದುಬೈನಿಂದ ಆಗಮಿಸಿದ್ದ ಮೂವರಲ್ಲಿ ಜ್ವರ, ಶೀತ, ಕೆಮ್ಮು, ಕುವೈತ್ ನಿಂದ ಮರಳಿದ್ದ ಮಹಿಳೆಗೆ ಕೆಮ್ಮು ಗಂಟಲು ನೋವು ಮತ್ತು ಕತಾರ್ ನಿಂದ ಮರಳಿದ್ದ ವ್ಯಕ್ತಿಯಲ್ಲಿ ತಲೆನೋವು, ಜ್ವರ ಹಾಗೂ ಕುಂದಾಪುರದ ವ್ಯಕ್ತಿಯಲ್ಲಿ ಶಂಕಿತ ಕೊರೊನಾ ಲಕ್ಷಣ ಕಾಣಿಸಿಕೊಂಡಿತ್ತು. ಐದು  ಮಂದಿಗೆ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಮತ್ತು ಕುಂದಾಪುರದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ರಕ್ತದ ಮಾದರಿ ಹಾಗೂ ಗಂಟಿನ ದ್ರವವನ್ನು ಪ್ರಯೋಗಾಲಯಕ್ಕೆ ರವಾನಿಸಿದ್ದು, ನಾಳೆ ವರದಿ ಬರುವ ಸಾಧ್ಯತೆ ಇದೆ ಎಂದು ಡಿಎಚ್ ಒ ತಿಳಿಸಿದ್ದಾರೆ.