ಉಡುಪಿ:ಸಾರ್ವತ್ರಿಕವಾಗಿ ಕಣ್ಣಿನ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಸಮಗ್ರ ಕಣ್ಣಿನ ಆರೈಕೆಗಾಗಿ ಸರಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರವನ್ನು ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್ ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಈ ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರಗಳಲ್ಲಿ ಕಣ್ಣಿನ ಸಮಸ್ಯೆ ಇರುವ ಸಾರ್ವಜನಿಕರಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುವುದು.ದೃಷ್ಠಿದೋಷವಿರುವ ಅರ್ಹ ಫಲಾನುಭವಿಗಳಿಗೆ ಈ ದೃಷ್ಠಿಕೇಂದ್ರಗಳಲ್ಲಿಯೇ ಚಿಕಿತ್ಸೆ, ಕನ್ನಡಕ ವಿತರಣೆ ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಗುರುತಿಸಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು.












