ಉಡುಪಿ:ಮೇ 9 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಉಡುಪಿ ನಗರಸಭಾ ಅಧೀನದ ಬಜೆ ಶುದ್ಧೀಕರಣ ಘಟಕದಲ್ಲಿರುವ ಕ್ಲಿಯರ್ ವಾಟರ್ ಸಂಪ್ ಅನ್ನು
ಸ್ವಚ್ಛಗೊಳಿಸುವ ಕಾಮಗಾರಿಯನ್ನು ಮೇ 9 ರಂದು ಹಮ್ಮಿಕೊಂಡಿರುವ ಹಿನ್ನೆಲೆ, ಬಜೆಯಿಂದ ಉಡುಪಿ ನಗರಕ್ಕೆ ನೀರು ಸರಬರಾಜನ್ನು ಸ್ಥಗಿತಗೊಳಿಸಬೇಕಾಗಿರುವುದರಿಂದ, ಸದ್ರಿ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.