ಉಡುಪಿ: ಹೋಲ್‌ಸೇಲ್ ಅಂಗಡಿಯ ಶಟರ್ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ನಗದು ದೋಚಿ ಪರಾರಿಯಾದ ಘಟನೆ ನಗರದ ಮೈತ್ರಿ ಕಾಂಪ್ಲೆಕ್ಸ್‌ನ ಕೆಳಮಹಡಿಯಲ್ಲಿ ನಡೆದಿದೆ.
ಗುಟ್ಕಾ, ಸಿಗರೇಟ್ ಮಾರಾಟ ಮಾಡುವ ನಗರದ ರಮಾ ಎಂಟರ್‌ಪ್ರೈಸ್ ( ಮಹಾದೇವಿ) ಸಗಟು ವ್ಯಾಪಾರದ ಅಂಗಡಿಯಲ್ಲಿ ಮಂಗಳವಾರ ಮಧ್ಯರಾತ್ರಿ ಸುಮಾರಿಗೆ ಘಟನೆ ನಡೆದಿದ್ದು, ಅಂಗಡಿಯ ಡ್ರಾವರ್‌ನಲ್ಲಿದ್ದ ಸುಮಾರು 12ಲಕ್ಷ ರೂ.ಗಳನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ.

ಕಳೆದ ಮೂರು ದಿನಗಳಿಂದ ಬ್ಯಾಂಕ್‌ಗಳಿಗೆ ಸಾಲು ರಜೆ ಇದ್ದ ಕಾರಣ ಅಂಗಡಿ ಮಾಲೀಕ ರವೀಂದ್ರ ನಾಯಕ್ ಹಣವನ್ನು ಅಂಗಡಿಯಲ್ಲೇ ಇಟ್ಟಿದ್ದರು. ಈ ವಿಷಯ ತಿಳಿದವರೇ ಕೃತ್ಯ ಎಸಗಿದ್ದಾರೆಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಕಳ್ಳರು ಕಳ್ಳತನ ಮಾಡುವ ಉದ್ದೇಶದಿಂದಲೇ ಹೊಸದಾಗಿ ಕಬ್ಬಿಣದ ಸರಳೊಂದನ್ನು ಖರೀದಿಸಿದ್ದು, ಅದರಿಂದ ಅಂಗಡಿಯ ಶಟರ್‌ನ್ನು ಮುರಿದು ಒಳಪ್ರವೇಶಿಸಿದ್ದಾರೆ. ನಗದು ಇಟ್ಟಿರುವ ಡ್ರಾವರನ್ನೇ ಮೀಟಿ ತೆಗೆದು ಹಣ ದೋಚಿದ್ದು, ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಂಗಡಿಗೆ ಅಳವಡಿಸಿರುವ ಎರಡು ಸಿಸಿಟಿವಿಗಳು ನಿಷ್ಕ್ರಿಯಗೊಂಡಿದ್ದು, ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ದೊಡ್ಡ ಸವಾಲಾಗಿದೆ.

ಹತ್ತಿರದ ಕೃಷ್ಣಕೃಪಾ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅಂಗಡಿಗಳ ಸಿಸಿಟಿವಿಯನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಸ್ಥಳಕ್ಕೆ ಉಡುಪಿ ಎಸ್ಪಿ ನಿಶಾ ಜೆಮ್ಸ್, ಸರ್ಕಲ್ ಇನ್‌ಸ್ಪೆಕ್ಟರ್ ಮಂಜುನಾಥ್, ಠಾಣಾಧಿಕಾರಿ ಅನಂತ ಪದ್ಮಾನಾಭ, ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು, ತನಿಖೆ ಮುಂದುವರಿದಿದೆ.