ಉಡುಪಿ: ಮಹಿಳೆ ನಾಪತ್ತೆ

ಉಡುಪಿ, ಫೆ.17: ಆರೋಗ್ಯ ತಪಾಸಣೆಗೆಂದು ಜಿಲ್ಲಾ ಆಸ್ಪತ್ರೆಗೆ ತೆರಳಿದ್ದ, ನಗರದ ಪುತ್ತೂರು ಗ್ರಾಮದ ನಿಟ್ಟೂರು ಸ್ತ್ರೀ ಸೇವಾ ನಿಕೇತನದಲ್ಲಿ ವಾಸವಿದ್ದ ನಳಿನಿ ದೇವಾಡಿಗ (45) ಎಂಬ ಮಹಿಳೆಯು ಫೆಬ್ರವರಿ 7 ರಿಂದ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಕಪ್ಪು ಮೈ ಬಣ್ಣ, ಸಪೂರ ಶರೀರ ಹೊಂದಿದ್ದು, ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.