ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದವರು. ಬುಧವಾರ ರಾತ್ರಿ ಇವರು ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥ ಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಈ ವೇಳೆ ಅವರು ಕೊನೆ ಉಸಿರು ಎಳೆದಿದ್ದರು.
ಅದೇ ಮೇಳದಲ್ಲಿ ತಂದೆ ಕೂಡ ವೇಷದಾರಿಯಾಗಿದ್ದರು.ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರಗೌಡ ಪಾತ್ರ ನಿರ್ವಹಿಸಿದ್ದರು. ಅವರ ಅಗಲಿಕೆಗೆ ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.


















