ಉಡುಪಿ: ಯುವಕ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಉದ್ಯಾವರ ಗ್ರಾಮದ ಪಿತ್ರೋಡಿ ನಿವಾಸಿ ಸುಜಿತ್ (26) ಎಂಬ ಯುವಕನು ಏಪ್ರಿಲ್ 29 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 7 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ:9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.