ಉಡುಪಿ:ವಸತಿ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ 198 ರಂತೆ ಅರಣ್ಯ ದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಮಲೈಕುಡಿಯ ಸಮುದಾಯದವರಿಗೆ “ಮುಖ್ಯಮಂತ್ರಿಗಳ ಆದಿವಾಸಿ ಗೃಹ ಭಾಗ್ಯ ಯೋಜನೆ”ಯಡಿ ಮನೆಗಳನ್ನು ನಿರ್ಮಾಣ ಮಾಡಲು ಜಿಲ್ಲೆಯ ವಸತಿ ರಹಿತ ಮಲೈಕುಡಿ ಸಮುದಾಯದವರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತ್ ಅಥವಾ ಐ.ಟಿ.ಡಿ.ಪಿ ಕಚೇರಿ ರಜತಾದ್ರಿ, ಮಣಿಪಾಲ
ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ
ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.