ಉಡುಪಿ : ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯ ಮೂಲಕ ಭರ್ತಿ ಮಾಡಲು ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅನ್ವಯ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮ ಪಂಚಾಯತ್, ಕಾಪು ತಾಲೂಕಿನ ಮುದರಂಗಡಿ ಗ್ರಾಮ ಪಂಚಾಯತ್, ಕುಂದಾಪುರ ತಾಲೂಕಿನ ತಲ್ಲೂರು ಹಾಗೂ ಹಾಲಾಡಿ ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ತಲಾ 1 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.
ಚುನಾವಣಾ ಅಧಿಸೂಚನೆ ಹೊರಡಿಸುವ ದಿನ ಮೇ 13, ನಾಮಪತ್ರ ಸಲ್ಲಿಸಲು ಕೊನೆಯ ದಿನ ಮೇ 16, ನಾಮಪತ್ರ ಪರಿಶೀಲಿಸುವ ದಿನ ಮೇ 17, ಉಮೇದುದಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ ಮೇ 20, ಮತದಾನ ಅವಶ್ಯವಿದ್ದರೆ ನಡೆಸುವ ದಿನ ಮೇ 29, ಹಾಗೂ ಮತ ಎಣಿಕೆಯು ಮೇ 31 ರಂದು ನಡೆಯಲಿದ್ದು, ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 13 ರಿಂದ 30 ರ ವರೆಗೆ ನೀತಿಸಂಹಿತೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.