ಉಡುಪಿ : ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಸರಕಾರಿ, ಖಾಸಗಿ, ಅನುದಾನಿತ ಹಾಗೂ ಪ್ರೌಢ ಶಾಲೆಗಳಿಗೆ ಜು.23ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಜು.25ರವರೆಗೆ ಪ್ರತಿದಿನ 200 ಮಿ.ಮೀ. ಮಳೆಯಾಗುವ ಸಾಧ್ಯತೆಯಿದ್ದು ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.