ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಫೆಲೋಶಿಪ್

ಉಡುಪಿ : 2019-20ನೇ ಸಾಲಿನಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯದ ಭಾರತ/ ಕರ್ನಾಟಕ ರಾಜ್ಯದ ಶಾಸನಬದ್ಧ ಅಂಗೀಕೃತವಾದ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕವಾಗಿ ಎಂ.ಫಿಲ್ ಮತ್ತು ಪಿ.ಎಚ್.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಎಂ.ಫಿಲ್ ಮತ್ತು ಪಿ.ಎಚ್.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಫೆಲೋಶಿಪ್ ಅರ್ಜಿಯನ್ನು ಇಲಾಖಾ ವೆಬ್‍ಸೈಟ್ ಮೂಲಕ ಅರ್ಜಿಯನ್ನು ಡೌನ್‍ಲೋಡ್ ಮಾಡಿ, ಪ್ರಿಂಟ್ ಪಡೆದು ಮಾರ್ಗಸೂಚಿಯಂತೆ ಭರ್ತಿಮಾಡಿ ಸೂಚಿಸಿರುವ ಎಲ್ಲಾ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಕಛೇರಿ ಸಮಯದಲ್ಲಿ ಸಲ್ಲಿಸಬಹುದಾಗಿದೆ.

   ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574881 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.