ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು, ಶನಿವಾರ ಜಿಲ್ಲೆಯ ವಿವಿಧ ಸ್ಥಳಗಳ ತನಿಖೆಗೆ ತೆರಳುತ್ತಿರುವ ಸಂದರ್ಭದಲ್ಲಿ, ಬೆಳ್ಮಣ್ – ಕಟಪಾಡಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದನ್ನು ಕಂಡು, ತಮ್ಮ ವಾಹನದಿಂದ ಇಳಿದು , ಸ್ವತ: ಸದ್ರಿ ರಸ್ತೆ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರಸ್ತೆ ದುರಸ್ತಿ ಕಾಮಗಾರಿಯ ಗುಣಮಟ್ಟ ಕಡಿಮೆ ಇರುವುದರ ಕುರಿತು ಸ್ಥಳದಲ್ಲಿದ್ದ ಸಂಬಂದಪಟ್ಟ ಗುತ್ತಿಗೆದಾರರಿಗೆ , ಸಮರ್ಪಕ ರೀತಿಯಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ದೂರವಾಣಿ ಮೂಲಕ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ಕಾಮಗಾರಿಯ ಗುಣಮಟ್ಟ ವನ್ನು ಪರೀಕ್ಷಿಸಿ, ಉತ್ತಮ ಗುಣಮಟ್ಟದಿಂದ ಕೂಡಿದ ದುರಸ್ತಿ ಕಾಮಗಾರಿಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.