udupixpress
Home Trending ಸೆ. 15 ರಂದು ಉಡುಪಿಯಲ್ಲಿ ಉಡುಪಿ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಸೆ. 15 ರಂದು ಉಡುಪಿಯಲ್ಲಿ ಉಡುಪಿ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ : ಪ್ರಧಾನಮಂತ್ರಿಗಳು ನೀಡಿದ ಕರೆಯಂತೆ ವೋಕಲ್ ಫಾರ್ ಲೋಕಲ್ ಕಾರ್ಯಕ್ರಮದ ಅಂಗವಾಗಿ,  ಉಡುಪಿ ಕೈಮಗ್ಗದ ಸೀರೆಗಳ ಪ್ರದರ್ಶನವನ್ನು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಮತ್ತು ಕೈಮಗ್ಗ ನೇಕಾರರ ಸಹಕಾರಿ ಸಂಘಗಳ ಆಶ್ರಯದಲ್ಲಿ ಸೆಪ್ಟಂಬರ್ 15 ರಂದು ಬೆಳಗ್ಗೆ  10.30 ಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಉಡುಪಿ ಕೈಮಗ್ಗ ಸೀರೆಗಳು ನಮ್ಮದೇ ನೇಕಾರರ ವಿಶಿಷ್ಟ ಕಲೆಯಾಗಿದ್ದು, ಈ ಕಲೆಯನ್ನು ಪ್ರೋತ್ಸಾಹಿ ಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ನ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಸದಸ್ಯರ ವಿಶೇಷ ಆಸಕ್ತಿಯಿಂದ ಈ ಕಾರ್ಯಕ್ರಮವನ್ನು ಸಭೆಯಲ್ಲಿ ಚರ್ಚಿಸಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಪ್ರೀತಿ ಗೆಹ್ಲೊಟ್ , ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು  ಕೈಮಗ್ಗ & ಜವಳಿ ಇಲಾಖೆಯ ಸಹಾಯಕ ನಿರ್ದೇಶಕ  ಎಚ್. ಶಿವಶಂಕರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!