ಉಡುಪಿ : ಕುಂದಾಪುರ ಪುರಸಭಾ ವ್ಯಾಪ್ತಿಯ ಎಲ್ಲಾ ವಾಸ್ತವ್ಯ ಮತ್ತು ವಾಣಿಜ್ಯ ಕಟ್ಟಡಗಳ ಮಾಲಕರು ತಮ್ಮ ಕಟ್ಟಡಗಳ 2019-20 ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರ ಒಳಗೆ ಪಾವತಿಸಿ, ಆಸ್ತಿ ತೆರಿಗೆ ಮೇಲೆ ಶೇ.5 ರಿಯಾಯಿತಿ ಪಡೆಯಬಹುದಾಗಿದೆ. ಜೂನ್ 30 ರ ತನಕ ಬಡ್ಡಿ ರಹಿತವಾಗಿ ಆಸ್ತಿ ತೆರಿಗೆ ಪಾವತಿಸಲು ಕೊನೆಯ ದಿನವಾಗಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಜುಲೈ 1 ರ ನಂತರ ಆಸ್ತಿ ತೆರಿಗೆ ಪಾವತಿಸಿದ್ದಲ್ಲಿ ತಿಂಗಳಿಗೆ ಶೇ. 2 ರ ದಂಡವನ್ನು ವಿಧಿಸಲಾಗುವುದು ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.