ಉಡುಪಿ : 2019-20 ನೇ ಸಾಲಿಗೆ ಉಡುಪಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಮಿತಿಗೊಳಪಟ್ಟ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಇಲಾಖೆವತಿಯಿಂದ ಗುರುತಿಸಲಾಗಿರುವ ವಸತಿ ಸೌಲಭ್ಯ ಹೊಂದಿರುವ ಪ್ರತಿಷ್ಟಿತ ಶಾಲೆಯಲ್ಲಿ 6 ನೇ ತರಗತಿಗೆ ಹೊಸದಾಗಿ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಲು ಸರ್ಕಾರವು ಅವಕಾಶ ಕಲ್ಪಿಸಿದೆ.
5 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇ. 60 ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು 6 ನೇ ತರಗತಿಗೆ ಒಟ್ಟು 5 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ಏಪ್ರಿಲ್ 29 ರಿಂದ ಪಡೆದು ಭರ್ತಿ ಮಾಡಿ ಅರ್ಹ ದಾಖಲಾತಿಗಳೊಂದಿಗೆ ಅರ್ಜಿಯನ್ನು ಮೇ 10 ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.