ಹಲವಾರು ಕಾರಣಗಳಿಗೆ ಪ್ರಜಾಪ್ರಭುತ್ವದ ಬೇರುಗಳು ದುರ್ಬಲಗೊಳ್ಳುತ್ತಿದೆ:ಡಾ|ಜೆರಾಲ್ಡ್ ಐಸಾಕ್ ಲೋಬೊ

ಉಡುಪಿ : ಹಲವಾರು ಕಾರಣಗಳಿಗೆ ಪ್ರಜಾಪ್ರಭುತ್ವದ ಬೇರುಗಳು ದುರ್ಬಲಗೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಗ್ಗೂಡುವ ಅಗತ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ
ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

ಕೆಥೊಲಿಕ್ ಉಡುಪಿ ಪ್ರದೇಶ್ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ 2020 ಜನವರಿ 19ರಂದು ಕಲ್ಯಾಣಪುರದ ಮೌಂಟ್ ರೋಜರಿ ಚರ್ಚಿನ ಮೈದಾನದಲ್ಲಿ ಆಯೋಜಿಸಿರುವ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಚಾರಿತ್ರಿಕ ಸಮ್ಮೇಳನ ಸಮುದಾಯೋತ್ಸವ-2020 ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ದೇಶದಲ್ಲಿ ವಸ್ತುಗಳ ಬೆಲೆ ಏರುತ್ತಿದ್ದು ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಕಳೆದ 25 ವರ್ಷಗಳಿಗೆ ಹೋಲಿಸಿದರೆ ನಮ್ಮ ಧರ್ಮಪ್ರಾಂತ್ಯದ ಹಿರಿಯರ ಸಂಖ್ಯೆ
ಹೆಚ್ಚುತ್ತಿದೆ ಮತ್ತು ಕ್ರೈಸ್ತರ ಸಂಖ್ಯೆ ಕಡಿಮೆಯಾಗುತ್ತಿದೆ. ಸಮುದಾಯವಾಗಿ ನಾವು ನಮ್ಮ ಜಿಲ್ಲೆಯಲ್ಲಿ ಬಹುಮತದಲ್ಲಿ ಮೂರನೇ ಸ್ಥಾನದಲ್ಲಿದ್ದೇವೆ. ನಾವು ನಮ್ಮ
ಹಿಂಜರಿಯುವ ಗುಣದಿಂದಾಗಿ ನಮ್ಮ ಶಕ್ತಿಯನ್ನು ಅಥವಾ ನಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿದ್ದೇವೆ ಎಂದರು.”

ಮುಖ್ಯ ಅತಿಥಿಗಳಾಗಿ ಆಗಮಿಸಿದ ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಘಟನಾವಳಿಗಳ ಕುರಿತು ಖೇದ ವ್ಯಕ್ತಪಡಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಡ್ವರ್ಡ್ ಲಾರ್ಸನ್ ಡಿಸೋಜಾ ಅವರ ನಮ್ಮ ಸಂವಿಧಾನ ಮತ್ತು ಹಕ್ಕುಗಳು ಇದರ ಕೊಂಕಣಿ ಪುಸ್ತಕ ಹಾಗೂ ಡಾ|ಜೆರಾಲ್ಡ್ ಪಿಂಟೊ ರಚಿತ ಕೆಥೊಲಿಕ್ ಸಭಾ ಚರಿತ್ರೆಯ ಪುಸ್ತಕಗಳನ್ನು ಅನಾವರಣಗೊಳಿಸಲಾಯಿತು.

ಕ್ರೈಸ್ತ ಸಮುದಾಯದ ಪ್ರಸ್ತುತ ಪರಿಸ್ಥಿತಿ ಮತ್ತು ಭವಿಷ್ಯದ ದೃಷ್ಟಿಕೋನ ವಿಚಾರದಲ್ಲಿ ಮಾಜಿ ಶಾಸಕ ಹಾಗೂ ನಿವೃತ್ತ ಕೆ ಎಸ್ ಅಧಿಕಾರಿ ಜೆ ಆರ್ ಲೋಬೊ ಪ್ರಧಾನ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಕೆ ಎ ಎಸ್ ಅಧಿಕಾರಿ ಅ್ಯಂಟನಿ ಮೆಂಡೊನ್ಸಾ, ನ್ಯಾಯಾವಾದಿ ವಂ|ಫ್ರಾನ್ಸಿಸ್ ಆಸ್ಸಿಸಿ ಆಲ್ಮೇಡಾ, ಹಿರಿಯ ಪತ್ರಕರ್ತ ಗ್ಯಾಬ್ರಿಯಲ್ ವಾಸ್,
ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ|ವಿನ್ಸೆಂಟ್ ಆಳ್ವ, ಮುಂಬೈ ಮಾಡೆಲ್ ಬ್ಯಾಂಕಿನ ಆಲ್ಬರ್ಟ್ ಡಿಸೋಜಾ, ಎಐಸಿಯು ಕಾರ್ಯದರ್ಸಿ ಜೆನೆಟ್ ಡಿಸೋಜಾ, ಎ ಐ ಸಿಯು ಅಧ್ಯಕ್ಷ ಆಸ್ಸಿಸಿ ಗೊನ್ಸಾಲ್ವಿಸ್, ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷ ರೋಲ್ಫಿ ಡಿಕೊಸ್ತಾ, ಜಾನ್ ಡಿಸಿಲ್ವಾ, ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ, ಕೆಥೊಲಿಕ್
ಸ್ತ್ರೀ ಸಂಘಟನೆಯ ಅಧ್ಯಕ್ಷೆ ಪ್ರಮೀಳಾ ಡೆಸಾ, ಎಲಿಯಾಸ್ ಡಿಸೋಜಾ ಸಂತೆಕಟ್ಟೆ, ಕೆಥೊಲಿಕ್ ಸಭಾ ಆಧ್ಯಾತ್ಮಿಕ ನಿರ್ದೇಶಕ, ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್,
ಕಾರ್ಯದರ್ಶಿ ಸಂತೋಷ್ ಕರ್ನೆಲಿಯೊ, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ನಿಯೋಜಿತ ಅಧ್ಯಕ್ಷ ರೋಬರ್ಟ್ ಮಿನೇಜಸ್, ನಿಕಟಪೂರ್ವ ಅಧ್ಯಕ್ಷ ವಲೆರೀಯನ್ ಫೆರ್ನಾಂಡಿಸ್, ಸಮುದಾಯೋತ್ಸವ ಸಂಚಾಲಕ ಎಲ್ ರೋಯ್ ಕಿರಣ್ ಕ್ರಾಸ್ಟೊ, ವಲಯಗಳ ಅಧ್ಯಕ್ಷರಾದ ರೊನಾಲ್ಡ್, ಹೆರಿಕ್,  ಐಡಾ ಕರ್ನೆಲಿಯೊ, ಹಾಗೂ ಇತರರು ಉಪಸ್ಥಿತರಿದ್ದರು.

ಕೆಥೊಲಿ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್ ಸ್ವಾಗತಿಸಿ, ಸಮುದಾಯೋತ್ಸವ ಕಾರ್ಯದರ್ಶಿ ಮೇರಿ ಡಿಸೋಜಾ ವಂದಿಸಿದರು. ಲೆಸ್ಲಿ ಆರೋಜಾ, ಎಡ್ವರ್ಡ್
ಲಾರ್ಸನ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.