ಉಡುಪಿ: 2019-20 ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಮಿತಿಗೊಳಪಟ್ಟ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಇಲಾಖಾ ವತಿಯಿಂದ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಯಲ್ಲಿ 6 ನೇ ತರಗತಿಗೆ ಹೊಸದಾಗಿ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಲು ಸರ್ಕಾರವು ಅವಕಾಶ ಕಲ್ಪಿಸಿದೆ.
5 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇ. 60 ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು 6 ನೇ ತರಗತಿಗೆ ಒಟ್ಟು 25 ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ಮೇ 2 ರಿಂದ ಪಡೆದು ಭರ್ತಿ ಮಾಡಿ ಅರ್ಹ ದಾಖಲಾತಿಗಳೊಂದಿಗೆ ಅರ್ಜಿಯನ್ನು ಮೇ 13 ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಐ.ಟಿ.ಡಿ.ಪಿಯ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.