ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಉಡುಪಿ ಜಿಲ್ಲೆ ಸಹಕಾರ ಯೂನಿಯನ್ ನಿ., ಉಡುಪಿ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಸ್ಥೆ ನಿ., ಕೊರಂಗ್ರಪಾಡಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತೀಯ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಉಡುಪಿಯ ಜನಪ್ರಿಯ ಸುದ್ದಿ ಜಾಲತಾಣ ಉಡುಪಿXPRESS.COM ಪ್ರಕಟಿಸಿದ ಸಹಕಾರ ಸಿಂಚನ ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ ಜಯಕರ್ ಶೆಟ್ಟಿ ಇಂದ್ರಾಳಿ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು. ಉಡುಪಿXPRESS.COM ನ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರುಗಳಾದ ಸ್ವರೂಪ್ ಶ್ರೀಯನ್, ಅಶೋಕ್ ಆಚಾರ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


















