udupixpress
Home Trending ಉದ್ಯಾವರ: ಆಶ್ರಯ ರಹಿತರಿಗೆ, ಕೂಲಿ ಕಾರ್ಮಿಕರಿಗೆ ಊಟ ವಿತರಣೆ

ಉದ್ಯಾವರ: ಆಶ್ರಯ ರಹಿತರಿಗೆ, ಕೂಲಿ ಕಾರ್ಮಿಕರಿಗೆ ಊಟ ವಿತರಣೆ

ಉಡುಪಿ: ದೇಶ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀ ದಿನಕರ ಬಾಬು ಇವರ ನೇತೃತ್ವದಲ್ಲಿ ಉದ್ಯಾವರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಆಶ್ರಯ ರಹಿತರಿಗೆ, ಕೂಲಿ ಕಾರ್ಮಿಕರಿಗೆ ಊಟವನ್ನು ವಿತರಿಸಲಾಗುತ್ತಿದ್ದು, ಊಟಕ್ಕೆ ಹಲವಾರು ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಇವರು ಕೂಡಾ ಊಟ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾಸ್ಕ್ ಹಾಗೂ ಊಟ ವಿತರಿಸಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಸರಕಾರದ ಜೊತೆ ಕೈಜೋಡಿಸುವಂತೆ ಕೂಲಿ ಕಾರ್ಮಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ಸ್ಥಳೀಯ ಪಂಚಾಯತ್ ಸದಸ್ಯರಾದ ಶ್ರೀ ರಾಧಾಕೃಷ್ಣ, ಕಾಪು ಕ್ಷೇತ್ರದ ಬಿಜೆಪಿ ಕಾರ್ಯದರ್ಶಿ ಶ್ರೀ ರಾಜೇಶ್ ಕುಂದರ್, ಪಂಚಾಯತ್ ಸದಸ್ಯರಾದ ಶ್ರೀಮತಿ ನಳಿನಿ, ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ ಶ್ರೀ ರವಿ ಪಡುಕರೆ, ಕಾಪು ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಸಚಿನ್ ಪಿತ್ರೋಡಿ ಉಪಸ್ಥಿತರಿದ್ದರು.

error: Content is protected !!