ಉಡುಪಿ: ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಜುಲೈ 11ರ ಶುಕ್ರವಾರ ದೋಣಿ ಮಗುಚಿ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟ ಉಡುಪಿಯ ಪಿತ್ರೋಡಿಯ ಮೃತ ನೀಲಾಧರ ಜಿ ತಿಂಗಳಾಯ ಅವರ ಕುಟುಂಬದವರಿಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯ ಅವರು ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ ಎಸ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು












