ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ನಳ್ಳಿ
ನೀರಿನ ಸಂಪರ್ಕವನ್ನು ಕಲ್ಪಿಸಿಕೊಂಡಿದ್ದಲ್ಲಿ, ನವೆಂಬರ್ 30 ರ ಒಳಗೆ ನಗರಸಭೆ ಕಚೇರಿಗೆ ನಿಯಮಾನುಸಾರ ಅರ್ಜಿ ಸಲ್ಲಿಸಿ, ಸದರಿ ಸಂಪರ್ಕವನ್ನು ಅಧಿಕೃತಗೊಳಿಸಿಕೊಳ್ಳಬೇಕು. ತಪ್ಪಿದಲ್ಲಿ ಯಾವುದೇ ಮುನ್ಸೂಚನೆ ನೀಡದೇ ಅನಧಿಕೃತ ಸಂಪರ್ಕವನ್ನು ಹಾಗೂ ನಗರಸಭಾ ಕಚೇರಿಯಿಂದ ನೀಡಲಾಗಿರುವ ಇತರೇ ಮೂಲಭೂತ ಸೌಲಭ್ಯಗಳನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.