ವಿದ್ಯಾರ್ಥಿಗಳೇ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರ ಅನ್ನಿಸಿಲ್ಲವೇ: ಹಾಗಿದ್ರೆ ಬೇಗ ಅರ್ಜಿ ಸಲ್ಲಿಸಿ

ಬೆಂಗಳೂರು: ಎಸ್ಎಸ್ಎಲ್’ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬರಹುದು. ಫಲಿತಾಂಶ ರದ್ದುಪಡಿಸಿಕೊಂಡ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಸಲ್ಲಿಕೆಯಾದ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಟೆಂಟ್ಸ್ ಅಜಿವ್ಮೆಂಟ್ ಟ್ರ್ಯಾಕಿಂಗ್ ಪೋರ್ಟಲ್ ನಲ್ಲಿ ದಾಖಲಿಸಲು ಜು.30 ಕೊನೆಯ ದಿನವಾಗಿದೆ. ಜು.31ರೊಳಗೆ ಅರ್ಜಿಗಳನ್ನು ಕಡ್ಡಾಯವಾಗಿ ತಮ್ಮ ಜಿಲ್ಲಾ ಉಪನಿರ್ದೇಶಕ ಕಚೇರಿಕೆ ಸಲ್ಲಿಸಬೇಕು. ಉಪ ನಿರ್ದೇಶಕರು ಆಗಸ್ಟ್ 2ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಬೇಕು.

ಪಿಯು ಪರೀಕ್ಷಾ ಶುಲ್ಕ ಮರುಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂತಿರುಗಿಸುವ ಯಾವುದೇ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆ ರದ್ದಾದರೂ ಫಲಿತಾಂಶ ನೀಡಲು ಇಲಾಖೆಗೆ ಹಾಲಿ ಸಂಗ್ರಹಿಸಿರುವ ಪರೀಕ್ಷಾ ಶುಲ್ಕದ ಮೊತ್ತಕ್ಕಿಂತ ಹೆಚ್ಚು ವೆಚ್ಚ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಆಗಿದೆ. ಹಾಗಾಗಿ ಪರೀಕ್ಷಾ ಶುಲ್ಕ ವಾಪಸ್ ನೀಡುವುದಿಲ್ಲ ಎಂದು ಹೇಳಿದ್ದಾರೆ.