ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ: ಸಚಿವರ ಪತ್ನಿ ಮೃತ್ಯು

ಶಿರಸಿ: ಅಂಕೋಲಾದ ತಾಲ್ಲೂಕಿನ ಎಕ್ಕಂಬಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಖಾತೆಯ ಸಚಿವ ಶ್ರೀಪಾದ್ ನಾಯಕ್ ಅವರ ಪತ್ನಿ ವಿಜಯಾ ಶ್ರೀಪಾದ್ ನಾಯಕ್ ಮೃತಪಟ್ಟಿದ್ದು, ಸಚಿವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಘಟನೆ ನಡೆದಿದ್ದು, ಸಚಿವರು ಪತ್ನಿಯ ಜೊತೆ ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುತ್ತಿದ್ದರು. ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯಗೊಂಡಿದ್ದಾರೆ. ಸಚಿವರ ಪತ್ನಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.