ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರ ಆರೋಗ್ಯದಲ್ಲಿ ಏರುಪೇರು ಆಗಿ ಕಾರಿನಲ್ಲಿಯೇ ಪ್ರಜ್ಞೆತಪ್ಪಿ ಕುಸಿದುಬಿದ್ದ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇಲ್ನೋಟಕ್ಕೆ ಪಿಟ್ಸ್ ಬಂದು ಮೂರ್ಛೆ ಹೋದ ರೀತಿಯಲ್ಲಿ ಕುಸಿದು ಬಿದ್ದರು ಎಂದು ಜೊತೆಗಿದ್ದ ಕಾರ್ಯಕರ್ತರು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ನಂತರ ಚಿತ್ರದುರ್ಗದ ಬಿಜೆಪಿ ಮುಖಂಡ ನವೀನ್ ಮಾಲೀಕತ್ವದ ನವೀನ್ ರೆಸಿಡೆನ್ಸಿಗೆ ಭೇಟಿ ನೀಡಿದ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ.

ವೈದ್ಯರಿಂದ ತಕ್ಷಣಕ್ಕೆ ಸಿಕ್ಕ ಮಾಹಿತಿ ಪ್ರಕಾರ ಸಚಿವರಿಗೆ ಲೋ ಶುಗರ್ ನಿಂದ ಬಳಲುತ್ತಿದ್ದು, ಇದರಿಂದ ಸ್ವಲ್ಪ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ನೀಡಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.