ಕೇಂದ್ರ ಸಚಿವೆಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ನಮನ ಸಲ್ಲಿಕೆ

ವರ್ಕಲ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಸಾಮಾಜಿಕ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ದಿನದಂದು ಕೇರಳದ ವರ್ಕಲದಲ್ಲಿನ ಶ್ರೀ ನಾರಾಯಣ ಗುರುಗಳ ಸಮಾಧಿಗೆ ಭೇಟಿ ನೀಡಿ ಗೌರವ ನಮನಗಳನ್ನು ಸಲ್ಲಿಸಿದ್ದಾರೆ.