ಧಾರವಾಡ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 4 Part Time ಟೀಚರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 12 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 28 ರಂದು ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಎ, ಎಂ.ಎಡ್ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು UAS ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/01/2022
ಸಂದರ್ಶನ ನಡೆಯುವ ದಿನಾಂಕ: 28/01/2022
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಡೀನ್ ಕಚೇರಿ(ಕೃಷಿ)
ಕೃಷಿ ವಿಶ್ವವಿದ್ಯಾಲಯ
ಧಾರವಾಡ
ಕರ್ನಾಟಕ












