ಕಾಪು: ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕೊಲೆಗೈದಿರುವ ಶಂಕೆ

 
ಕಾಪು: ಕಾಪುವಿನ ಮಾರ್ಕೆಟ್ ಬಳಿ ಇಂದು ಮುಂಜಾನೆ ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತದೇಹದ ಬಳಿ ರಕ್ತದ ಕಲೆ ಅಂಟಿಕೊಂಡಿರುವ ಕಲ್ಲು ಸಿಕ್ಕಿದ್ದು, ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಪು ಠಾಣೆಯ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.