ನವದೆಹಲಿ: ಕೇಂದ್ರ ಸರ್ಕಾರ ಅನ್ ಲಾಕ್ 4.0 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಸೆಪ್ಟೆಂಬರ್ 7ರಿಂದ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿದೆ. ಉಳಿದಂತೆ ಶಾಲಾ ಕಾಲೇಜು, ಚಿತ್ರಮಂದಿರ, ಈಜುಕೊಳ, ಮನೋರಂಜನಾ ಪಾರ್ಕ್ ಗಳಿಗೆ ವಿಧಿಸಿರುವ ನಿರ್ಬಂಧವನ್ನು ಮುಂದುವರಿಸಿದೆ.
ಹೊಸ ಮಾರ್ಗಸೂಚಿಯಂತೆ ಸೆ. 7ರಿಂದ ಕರ್ನಾಟಕದ ಬೆಂಗಳೂರು ಸೇರಿದಂತೆ ದೇಶದಾದ್ಯಂತ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಆದರೆ, ಸೆಪ್ಬೆಂಬರ್ ತಿಂಗಳ ಅಂತ್ಯದವರೆಗೂ ಶಾಲಾ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮಾರ್ಗಸೂಚಿಯ ಪ್ರಮುಖ ಅಂಶಗಳು:
* ಸೆಪ್ಟೆಂಬರ್ 21ರಿಂದ ಬಯಲು ರಂಗ ಮಂದಿರಗಳನ್ನು ಆರಂಭಿಸಬಹುದು
*ಆನ್ಲೈನ್ ತರಗತಿಗಳನ್ನು ನಡೆಸಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರಕಾರಗಳಿಗೆ ಅನುಮತಿ. ಶೇ. 50ರಷ್ಟು ಸಿಬ್ಬಂದಿಗೆ ಶಾಲಾ-ಕಾಲೇಜುಗಳಲ್ಲಿ ಅವಕಾಶ
*ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ ಮತ್ತು ರಾಜಕೀಯ ಕಾರ್ಯಕ್ರಮಗಳಲ್ಲಿ 100 ಜನರವರೆಗೆ ಸೇರಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್ 21ರಿಂದ ಇದು ಅನ್ವಯವಾಗಲಿದೆ.
*ಸೆಪ್ಟೆಂಬರ್ 30ರವರೆಗೂ ಕಂಟೈನ್ಮೆಂಟ್ ಝೋನ್ಗಳಲ್ಲಿ ಕಠಿಣ ಲಾಕ್ಡೌನ್ ಮುಂದುವರಿಯಲಿದೆ.
*ಸಿನಿಮಾ ಮಂದಿರ, ಈಜುಕೊಳ, ಮನರಂಜನಾ ಪಾರ್ಕ್ಗಳು, ಒಳಾಂಗಣ ರಂಗಮಂದಿರಗಳು, ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ಅವಕಾಶವಿಲ್ಲ.