ರಾಜ್ಯದಲ್ಲಿ ಅನ್ ಲಾಕ್  4.O ಜಾರಿ: ಸಿನಿಮಾ ಥಿಯೇಟರ್, ಪದವಿ ಕಾಲೇಜು ಆರಂಭಿಸಲು ಅನುಮತಿ, ನೈಟ್ ಕರ್ಪ್ಯೂನಲ್ಲಿ ಸಡಿಲಿಕೆ

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್  4.O ಮಾರ್ಗಸೂಚಿ ಜಾರಿಗೊಂಡಿದ್ದು, ನಾಳೆಯಿಂದಲೇ (ಜುಲೈ 19) ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲಿದೆ. ಅಲ್ಲದೆ, ಜುಲೈ 26 ರಿಂದ ಪದವಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ.

ಮುಖ್ಯಮಂತ್ರಿ ಬಿ,ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯಾದ್ಯಂತ ನೈಟ್​ ಕರ್ಫ್ಯೂ ಅವಧಿಯಲ್ಲಿ ಒಂದು ಗಂಟೆ ಸಡಿಲಗೊಳಿಸಿ, ರಾತ್ರಿ  10 ರಿಂದ ಬೆಳಗ್ಗೆ 5 ಗಂಟೆ ವರೆಗೆ ವಿಧಿಸಿ ಆದೇಶಿಸಿದ್ದಾರೆ.
ಸಿನಿಮಾ ಥಿಯೇಟರ್ ಗಳಲ್ಲಿ ಶೇ. 50 ರಷ್ಟು ಸೀಟುಗಳ ಭರ್ತಿಯೊಂದಿಗೆ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ ನೀಡಲಾಗಿದೆ.

ಪದವಿ ತರಗತಿಗಳನ್ನು ಜುಲೈ 26ರಿಂದ ಪ್ರಾರಂಬಿಸಲು ಆದೇಶಿಸಿದ್ದು ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಕೊರೋನಾ ಲಸಿಕೆ ಪಡೆದು ತರಗತಿಗಳಿಗೆ ಹಾಜರಾಗಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.