ಮಂಗಳೂರು: ಉನ್ನಾವೋ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಉನ್ನಾವೋದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಮಹಿಳೆಯ ಅತ್ಯಾಚಾರಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಅವರು ಉತ್ತರಪ್ರದೇಶ ಸರಕಾರ ಅತ್ಯಾಚಾರಕ್ಕೊಳಗಾದ ಮಹಿಳೆಗೆ ಸಹಾಯಹಸ್ತ ಚಾಚದೆ ಆಕೆಯ ಹತ್ಯೆಯಾಯಿತು. ತೆಲಂಗಾಣದಲ್ಲಿ ಅತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಿದಂತೆ ಉನ್ನಾವೋ ಅತ್ಯಾಚಾರಿಗಳನ್ನು ಶಿಕ್ಷಿಸಬೇಕಾಗಿದೆ ಎಂದರು.












