ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೆಸಾ ಮೆಮೋರಿಯಲ್ ಶಾಲೆಯ ವಿದ್ಯಾರ್ಥಿಗಳ ಅಪ್ರತಿಮ ಸಾಧನೆ.

ಕುಂದಾಪುರ: ಮದರ್ ತೆರೆಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣ, ಈ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಾದ ಪ್ರೀತಂ ಜಿ 10ನೇ ತರಗತಿ ಹಾಗೂ ಧನ್ವಿತ್ ಡಿ 9ನೇ ತರಗತಿ ಇವರು ಸರಕಾರಿ ಪ್ರೌಢಶಾಲೆ, ಒಳಕಾಡು ,ಉಡುಪಿ ಇಲ್ಲಿ ಅ.29 ರಂದು ನಡೆದ ಜಿಲ್ಲಾಮಟ್ಟದ ಐಟಿ ಕ್ವಿಜ್ ನಲ್ಲಿ ಭಾಗವಹಿಸಿ ಮೈಸೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟದ ಐಟಿ ಕ್ವಿಜ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಒಟ್ಟು 250 ವಿದ್ಯಾರ್ಥಿಗಳಲ್ಲಿ 50ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ,ಈ ವಿಶೇಷ ಸಾಧನೆ ಮಾಡಿದ ಮದರ್ ತೆರೆಸ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ , ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.